ಇಂಫಾಲ್: ಮಣಿಪುರದ ರಾಜಧಾನಿ ಇಂಫಾಲದಲ್ಲಿ ನಡೆದ ಪ್ರಬಲ ಐಇಡಿ ಸ್ಪೋಟದಲ್ಲಿ ಆರು ಮಂದಿ ಪೊಲೀಸರು ಗಾಯಗೊಂಡಿರುವ ಘಟನೆಯು ನಡೆದಿದೆ.
ಇಂಫಾಲದ ಥೆಂಗಲ್ ಬಜಾರ್ ಪ್ರದೇಶದಲ್ಲಿ ಈ ಘಟನೆಯು ನಡೆದಿದೆ. ಪೊಲೀಸರು ಬಾಂಬ್ ನ್ನು ಪತ್ತೆ ಮಾಡಿದ್ದರು ಮತ್ತು ಬಾಂಬ್ ನಿಷ್ಕ್ರೀಯ ದಳಕ್ಕಾಗಿ ಕಾಯುತ್ತಿದ್ದ ವೇಳೆ ಇದು ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.