ನವದೆಹಲಿ: ಅರೇಬಿಯನ್ ಸಮುದ್ರ ಪೂರ್ವಕೇಂದ್ರ ಮತ್ತು ಪಶ್ಚಿಮ ಕೇಂದ್ರದಲ್ಲಿ ಭಾರೀ ಚಂಡಮಾರುತದಿಂದಾಗಿ ಗುಜರಾತ್ ಮತ್ತು ಮಹಾರಾಷ್ಟ್ರ, ದಮನ್ ಮತ್ತು ದಿಯು, ದಾದ್ರಾ ಮತ್ತು ನಾಗರ್ ಹವೇಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿದೆ.
ನವಂಬರ್ 6ರ ತನಕ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಈ ಪ್ರದೇಶಗಳಲ್ಲಿ ಮೀನುಗಾರಿಕೆಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.
ಸೌರಾಷ್ಟ್ರ ಹಾಗೂ ಗುಜರಾತ್ ನ ಕೆಲವೊಂದು ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳು ಇವೆ ಎಂದು ಐಎಂಡಿ ತಿಳಿಸಿದೆ.