ಬೆಂಗಳೂರು: ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಇಂದು ರಾಜ್ಯದಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಲಿವೆ.
ಈ ಸಂಬಂಧ ಭಾರತೀಯ ವೈದ್ಯಕೀಯ ಸಂಘವು ಕರೆಯನ್ನು ನೀಡಿದ್ದು ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.
ಕರವೇ ಕಾರ್ಯಕರ್ತರು ಕ್ಷಮೆಯಾಚಿಸಬೇಕು ಹಾಗೂ ಅವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ದೃಷ್ಟಿಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಕಿರಿಯ ವೈದ್ಯರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.