ಶ್ರೀನಗರ: ಗುರುವಾರ ಪೂಂಛ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘನೆ ಮಾಡಿ ನಡೆಸಿದ ಗುಂಡಿನ ದಾಳಿಯಲ್ಲಿ ಬೆಳಗಾವಿ ಜಿಲ್ಲೆ ಉಚ್ಚಗಾವ್ ನ ಯೋಧ ರಾಹುಲ್ ಭೈರು ಸುಳಗೇಕರ್ ಹುತಾತ್ಮರಾಗಿದ್ದಾರೆ.
ದಾಳಿಗೆ ಭಾರತೀಯ ಸೇನೆಯು ತಕ್ಕ ಉತ್ತರ ನೀಡಿದೆ. ದಾಳಿಯಲ್ಲಿ ಸುಳಗೇಕರ್ ಗಾಯಗೊಂಡಿದ್ದು, ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಲಿಲ್ಲ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.