ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ವಿವಾದ ಪ್ರಕರಣದ ತೀರ್ಪು ಸದ್ಯದಲ್ಲೇ ಬರಲಿರುವ ಕಾರಣದಿಂದಾಗಿ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯಿ ಅವರು ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಭದ್ರತಾ ವ್ಯವಸ್ಥೆ ಬಗ್ಗೆ ಮಾತನಾಡಿದರು.
ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ತಿವಾರಿ ಮತ್ತು ಡಿಸಿಪಿ ಓಂ ಪ್ರಕಾಶ್ ಸಿಂಗ್ ಅವರು ಭೇಟಿ ಮಾಡಿ ಭದ್ರತಾ ವ್ಯವಸ್ಥೆ ಬಗ್ಗೆ ಎಲ್ಲಾ ರೀತಿಯ ಮಾಹಿತಿ ಸಂಗ್ರಹಿಸಿದರು.
ಭದ್ರತಾ ವ್ಯವಸ್ಥೆ ವಿಚಾರದಲ್ಲಿ ಕೇಂದ್ರ, ಬೇರೆ ರಾಜ್ಯಗಳು ಮತ್ತು ಸುಪ್ರೀಂ ಕೋರ್ಟ್ ನಿಂದ ಯಾವುದೇ ರೀತಿಯ ಮಾಹಿತಿ ಬೇಕಿದ್ದರೆ ಅದನ್ನು ನೀಡುವುದಾಗಿ ಅವರು ತಿಳಿಸಿದರು.
ಶುಕ್ರವಾರ ಮಧ್ಯಾಹ್ನ ಮುಖ್ಯ ನ್ಯಾಯಾಧೀಶರ ಕೊಠಡಿಯಲ್ಲಿ ಸಭೆ ನಡೆಯಿತು.