ನವದೆಹಲಿ: ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಹೇಳಿಕೆ ನೀಡಿರುವ ಪಾಕಿಸ್ತಾನದ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದೆ.
ಭಾರತದ ಆಂತರಿಕ ವಿಚಾರಗಳ ಬಗ್ಗೆ ಮೂಗು ತೂರಿಸಿ, ದ್ವೇಷ ಹಬ್ಬುತ್ತಿರುವ ಪಾಕಿಸ್ತಾನದ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಭಾರತ ಸರ್ಕಾರ ಹೇಳಿದೆ.
ಅನಗತ್ಯ ಹಾಗೂ ಸಂಬಂಧವೇ ಇಲ್ಲದೆ ಇರುವ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಇದು ಕಾನೂನಿನ ತೀರ್ಪು ಮತ್ತು ಎಲ್ಲರ ನಂಬಿಕೆಗಳಿಗೆ ಗೌರವ ನೀಡಿದೆ. ಭಾರತದ ಆಂತರಿಕ ವಿಚಾರಗಳಲ್ಲಿ ಮೂಗು ತೂರಿಸುವುದು ಪಾಕ್ ಗೆ ಒಂದು ರೋಗಗ್ರಸ್ತ್ರ ಮನಸ್ಥಿತಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸುಪ್ರೀಂಕೋರ್ಟ್ ನಿನ್ನೆ ತೀರ್ಪು ನೀಡಿದೆ.