ಚೆನ್ನೈ: ಇಲ್ಲಿನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಫಾತೀಮಾ ಲತೀಫ್ ಎಂದು ಗುರುತಿಸಲಾಗಿದೆ. ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿರುವರು.
ಕೇರಳ ಮೂಲದ ಫಾತಿಮಾ ಕ್ಯಾಂಪಸ್ ನ ಸರಯೂ ವಸತಿನಿಲಯದಲ್ಲಿ ತಂಗಿದ್ದಳು.