ಹರಿಯಾಣ: ಅಂಬಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬಸ್ ಅಪಘಾತದಲ್ಲಿ ಓರ್ವ ಮಹಿಳೆ ಗಾಯಗೊಂಡು 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಬಸ್ ನಲ್ಲಿದ್ದವರು ಕುರುಕ್ಷೇತ್ರದಿಂದ ವಾಪಾಸ್ಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಬಸ್ ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ 35ಮಂದಿ ಗಾಯಗೊಂಡಿದ್ದಾರೆ.
ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಯಾಣಿಕರ ಪ್ರಕಾರ, ‘ಚಾಲಕ ಬಸ್ ನ ನಿಯಂತ್ರಣ ಕಳೆದುಕೊಂಡ ಹಿನ್ನೆಲೆ ಅಪಘಾತ ನಡೆದಿದೆ. ಸ್ಥಳಕ್ಕೆ ಶಾಸಕ ಆಸೀಂ ಗೋಯಾಲ್ ಭೇಟಿ ನೀಡಿದ್ದಾರೆ.