ಮುಂಬೈ: ಮಹಾರಾಷ್ಟ್ರದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರ್ ಅವರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದಾರೆ ಎಂಬ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಶಿವಸೇನಾ ನಿರ್ಧಾರ ಮಾಡಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಶಿಫಾರಸು ಮಾಡುತ್ತಿದ್ದಂತ್ತೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ನಿವಾಸದಲ್ಲಿ ಚರ್ಚೆಗಳು ನಡೆಯುತ್ತಿದೆ. ಈ ಹಿನ್ನೆಲೆ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಹ್ಮದ್ ಪಟೇಲ್ ಅವರೊಂದಿಗೆ ಉದ್ಧವ್ ಠಾಕ್ರೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದರೆ ರಾಜ್ಯಪಾಲರ ಕಚೇರಿಯಿಂದ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿಲ್ಲ ಎಂದು ಸ್ಪಷ್ಟನೆ ಬಂದಿದೆ.