ನವದೆಹಲಿ: ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಸಂತೃಪ್ತರಾಗಿರುವ ಅನರ್ಹ ಶಾಸಕರು ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಅಧಿಕೃತವಾಗಿ ಸೇರ್ಪಡೆಯಾಗಲಿರುವರು.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ನಿವಾಸದಲ್ಲಿ ಅನರ್ಹ ಶಾಸಕರು ಸುಪ್ರೀಂ ತೀರ್ಪಿನ ಬಳಿಕ ಸಭೆ ನಡೆಸಿದರು. ನಾಳೆ ಬೆಳಗ್ಗೆ 10.30ಕ್ಕೆ ಅವರೆಲ್ಲರೂ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿರುವರು.
ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನೀಡುವ ಪ್ರಕ್ರಿಯೆಯಲ್ಲಿ ಸಂತೋಷ್ ಅವರು ಪ್ರಮುಖ ಪಾತ್ರ ವಹಿಸಲಿರುವ ಕಾರಣದಿಂದಾಗಿ ಈ ಭೇಟಿಯು ಮಹತ್ವದ್ದಾಗಿದೆ.
ಎಚ್. ವಿಶ್ವನಾಥ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಪ್ರತಾಪಗೌಡ, ಶಂಕರ್, ನಾರಾಯಣಗೌಡ, ಶ್ರೀಮಂತ ಪಾಟೀಲ, ಮಹೇಶ್ ಕಮಠಳ್ಳಿ, ರಮೇಶ್ ಜಾರಕಿಹೊಳಿ ಮೊದಲಾದವರು ಸಭೆಯಲ್ಲಿ ಭಾಗಿಯಾದರು.