ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎನ್ನುವ ವಿಚಾರಕ್ಕೆ ಸಂಬಂಧಿಸಿದ 2018ರ ತೀರ್ಪಿನ ಮರುಪರಿಶೀಲನೆಗೆ ಸಲ್ಲಿಸಿದ್ದ ಅರ್ಜಿಯನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ.
ದೇಗುಲ ಪ್ರವೇಶ ಕೇವಲ ಹಿಂದೂಗಳ ವಿಚಾರವಲ್ಲ, ಮುಸ್ಲಿಮರ ಹಾಗೂ ಪಾರ್ಸಿಗಳ ವಿಚಾರವೂ ಇದೆ. ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಧಾರ್ಮಿಕ ಸ್ವಾತಂತ್ರ್ಯದ ವಿಚಾರ ಇದೆ. ಇದರಿಂದ ವಿಚಾರಣೆಯನ್ನು ಏಳು ಸದಸ್ಯರ ಪೀಠಕ್ಕೆ ವರ್ಗಾಯಿಸಿದೆ.
ಶಬರಿಮಲೆ ದೇವಾಲಯ ವಿಚಾರಣೆಯನ್ನು 3:2 ಬಹುಮತದಿಂದ ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನಿರ್ಧರಿಸಲಾಗಿದೆ.