ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ತನಿಖೆ ನಡೆಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದ್ದು, ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದರು.
ಪ್ರಧಾನಿ ಮೋದಿ ಅವರನ್ನು ಚೋರ್(ಕಳ್ಳ) ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದು ಹೋದ ಕಡೆಯೆಲ್ಲಾ ಹೇಳುತ್ತಿದ್ದ ರಾಹುಲ್ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ ದಾವೆ ಹೂಡಲಾಗಿತ್ತು.
ರಾಹುಲ್ ಗಾಂಧಿ ಅವರ ವಿರುದ್ಧ ಸುಪ್ರೀಂ ಎಚ್ಚರಿಕೆ ನೀಡಿದೆ. ಅವರು ಎಷ್ಟು ಸುಳ್ಳು ಹೇಳುತ್ತಿದ್ದರು ಎಂದು ಈಗ ತಿಳಿಯುತ್ತಿದೆ. ಇದಕ್ಕಾಗಿ ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಪ್ರಸಾದ್ ತಿಳಿಸಿದರು.