ನವದೆಹಲಿ: ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೆಂಬಲಿಸಿದ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ವಾಸಿಂ ರಿಜ್ಮಿ ಅವರು 51 ಸಾವಿರ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ರಾಮಮಂದಿರವನ್ನು ಯಾವಾಗ ನಿರ್ಮಿಸಿದರೂ ಶಿಯಾ ವಕ್ಫ್ ಮಂಡಳಿ ಸಹಕಾರ ನೀಡಲಿದೆ. ಅಯೋದ್ಯೆಯಲ್ಲಿರುವ ರಾಮಮಂದಿರವು ಭಾರತವಲ್ಲದೆ ವಿಶ್ವದಾದ್ಯಂತ ಇರುವ ರಾಮಭಕ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಅಯೋದ್ಯೆಯಲ್ಲಿ ರಾಮಮಂದಿರ ನಿರ್ಮಿಸಬೇಕು, ಸುನ್ನಿ ವಕ್ಫ್ ಬೋರ್ಡ್ ಮಸೀದಿ ನಿರ್ಮಾಣಕ್ಕೆ ಬೇರೆಡೆ 5 ಎಕರೆ ಭೂಮಿ ನೀಡುವುದಾಗಿ ನವೆಂಬರ್ 9ರಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿತ್ತು.