ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಚಿದಂಬರಂ ಅವರಿಗೆ ಜಾಮೀನು ನೀ ಜೈಲಿನಿಂದ ಬಿಡುಗಡೆ ಮಾಡಿದರೆ ಆಗ ಸಮಾಜಕ್ಕೆ ಒಂದು ತಪ್ಪು ಸಂದೇಶ ರವಾನೆ ಆಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ವಿಚಾರಣೆ ವೇಳೆ ಹಲವಾರು ರೀತಿಯಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ದಾಖಲೆಗಳು ಸಿಕ್ಕಿದೆ. ಇದರಲ್ಲಿ ಚಿದಂಬರಂ ಅವರು ತುಂಬಾ ಪ್ರಮುಖ ಪಾತ್ರ ವಹಿಸಿರುವುದು ಪತ್ತೆಯಾಗಿದೆ ಎಂದು ಕೋರ್ಟ್ ತಿಳಿಸಿದೆ.
ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ದೆಹಲಿಯ ವಿಶೇಷ ನ್ಯಾಯಾಲಯವು ಬುಧವಾರ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ನವಂಬರ್ 27ರ ತನಕ ಮುಂದುವರಿಸಿತ್ತು.
ಆಗಸ್ಟ್ ನಲ್ಲಿ ಐಎನ್ ಎಕಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ಬಂಧಿಸಲಾಗಿತ್ತು.