ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಯಾವುದೇ ತನಿಖೆ ಆಗಬೇಕಿಲ್ಲ ಮತ್ತು ಸುಳ್ಳು ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ, ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದ ಬಳಿಕ ಬಿಜೆಪಿ ರಾಹುಲ್ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಹುರುಳಿಲ್ಲದ ಆರೋಪ ಮಾಡಿರುವ ರಾಹುಲ್ ಗಾಂಧಿ ವಿರುದ್ಧ ಶನಿವಾರ ಬಿಜೆಪಿ ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ ಆರೋಪದಿಂದಾಗಿ ಭಾರತದ ಘನತೆಗೆ ವಿದೇಶದಲ್ಲಿ ಧಕ್ಕೆಯಾಗಿದೆ. ಇಂತಹ ಆರೋಪ ಮಾಡಿರುವಂತಹ ರಾಹುಲ್ ಗಾಂಧಿ ಮುಖವಾಡ ಕಳಚಬೇಕಾಗಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳಿಗೆ ತಿಳಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ರಾಹುಲ್ ಪ್ರಧಾನಿ ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.