ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನಾನು ರಾಷ್ಟ್ರೀಯ ಏಕತೆಯ ದೃಷ್ಟಿಕೋನದಿಂದ ನೋಡುತ್ತೇನೆ ಎಂದು ಯೋಗಗುರು ಬಾಬಾ ರಾಮ್ ದೇವ್ ಅವರು ತಿಳಿಸಿದರು.
ದೇಶದ ಶೇ.99ರಷ್ಟು ಮುಸ್ಲಿಮರು ಮತಾಂತರಗೊಂಡವರು. ಹಿಂದೂಗಳು ಮಾತ್ರವಲ್ಲ, ಮುಸ್ಲಿಮರು ಕೂಡ ರಾಮನನ್ನು ಪೂಜಿಸುತ್ತಿದ್ದರು ಎಂದು ಅವರು ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದರು.
ಅಯೋಧ್ಯೆಯ ರಾಮಮಂದಿರವು ಹಿಂಗೂಗಳ ಸಂಸ್ಕೃತಿ ಬಿಂಬಿಸುವಂತೆ ಇರಬೇಕು. ಅಲ್ಲಿ ವಿಶ್ವದಲ್ಲೇ ಅತೀ ಸುಂದರವಾದ ರಾಮ ಮಂದಿರ ನಿರ್ಮಾಣವಾಗಬೇಕು ಎಂದರು.