ರಾಜಸ್ಥಾನ: ಇಲ್ಲಿನ ಬಿಕಾನೆರ್ ಪ್ರದೇಶದಲ್ಲಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ನಡೆದು 10 ಮಂದಿ ಸಾವನ್ನಪ್ಪಿ, 22ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಈ ಅವಘಡ ಬಿಕಾನೆರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 11ರಲ್ಲಿ ನಡೆದಿದೆ.
9 ಮಂದಿಯ ಮೃತದೇಹವನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದೆ.