ನವದೆಹಲಿ: ಜವಾಹರ ಲಾಲ್ ನೆಹರೂ ವಿಶ್ವವಿದ್ಯಾನಿಲಯ(ಎನ್ ಎನ್ ಯು) ವಿದ್ಯಾರ್ಥಿಗಳು ನಡೆಸಿರುವ ಪ್ರತಿಭಟನೆ ಉಲ್ಲಂಘನೆ ಆಗಿದೆ ಎಂದು ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಸೆಕ್ಷನ್ 144 ಹೇರಿದ್ದ ಹೊರತಾಗಿಯೂ ವಿದ್ಯಾರ್ಥಿಗಳು ಸಂಸತ್ತಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು ಮತ್ತು ಈ ವೇಳೆ ಪೊಲೀಸರು ಅವರನ್ನು ತಡೆದಿದ್ದರು.
ಕಿಶನ್ ಘಡ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ಪ್ರಕಾರ 186/353ಯಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಆದರೆ ಈ ಬಗ್ಗೆ ವಿದ್ಯಾರ್ಥಿಗಳಿಂದ ಯಾವುದೇ ದೂರು ದಾಖಲಾಗಿಲ್ಲ.