ನವದೆಹಲಿ: ಮಹಾರಾಷ್ಟ್ರದಲ್ಲಿ ಶಿವಸೇನಾದವರೇ 5ವರ್ಷಗಳ ಕಾಲ ಸಿಎಂ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಸಂಸದ ಸಂಜಯ್ ರಾವುತ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರದಲ್ಲಿ ಎನ್ ಸಿಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಹೊಸ ಸರ್ಕಾರದ ಮಾತುಕತೆಯಲ್ಲಿರುವಾಗ ಇಂದು ಸಂಜಯ್ ರಾವುತ್ ಈ ರೀತಿಯ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದೆ.
ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ನಾವು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಸಿ ಜತೆಗಿನ ಮೂರು ಪಕ್ಷಗಳ ಮೈತ್ರಿ ಅಧಿಕಾರ ವಹಿಸಿಕೊಂಡಾಗ ತಮ್ಮ ಪಕ್ಷಕ್ಕೆ ಸಿಎಂ ಹುದ್ದೆ ಸಿಗಲಿದೆ ಎಂದರು.