ಜಮ್ಮು-ಕಾಶ್ಮೀರ: ಇಲ್ಲಿನ ವಿಶ್ವವಿದ್ಯಾಲಯದ ಹೊರಗಡೆ ನಡೆದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದು ಗ್ರೇನೆಡ್ ಅಥವಾ ಪೆಟ್ರೋಲ್ ಬಾಂಬ್ ಆಗಿರಬಹುದು ಎಂದು ಶಂಕಿಸಿದ್ದಾರೆ.
ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿ ಅದು ಗ್ರೇನೆಡ್ ದಾಳಿ ಎಂದು ಹೇಳಿಕೆ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಲಭಿಸಬೇಕಿದೆ