ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಜಾಮೀನು ನೀಡುವ ಅರ್ಜಿಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ.
ಜಾರಿ ನಿರ್ದೇಶನಾಲಯ(ಇ.ಡಿ.) ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಚಿದಂಬರಂ ವಿರುದ್ಧ ದಾಖಲಿಸಿಕೊಂಡಿರುವ ದೂರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಚಿದಂಬರಂ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಇ.ಡಿ.ಪರವಾಗಿ ವಾದಿಸುತ್ತಿರುವ ಸಾಲಿಸಿಟರ್ ಜನರಲ್(ಎಸ್ ಜಿ) ತುಷಾರ್ ಮೆಹ್ತಾ ಅವರು ಬೇರೆ ಪೀಠವೊಂದರ ಮುಂದೆ ವಾದದಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲಾಯಿತು.