ಮಹಾರಾಷ್ಟ್ರ: ನಾಳೆ ಬಹುಮತ ಸಾಬೀತಿಗೂ ಮುನ್ನಾವೇ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಶನಿವಾರ ಮುಂಜಾನೆ ಮಹಾರಾಷ್ಟ್ರ ರಾಜಕೀಯ ಕ್ಷಿಪ್ರ ಬೆಳವಣಿಗೆಯೆಂಬತೆ ದೇವೇಂದ್ರ ಫಡವಿಸ್ ಮುಖ್ಯಮಂತ್ರಿಯಾಗಿ, ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಸಂಬಂಧ ವಿರೋಧ ಪಕ್ಷದವರು ಒಟ್ಟಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇಂದು ಸುಪ್ರೀಂಕೋರ್ಟ್ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಸಂಬಂಧ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಳೆ ಸಂಜೆ 5ರ ಳಗೆ ಬಹುಮತ ಸಾಬೀತು ಪಡಿಸಬೇಕೆಂದು ಮಹತ್ವದ ತೀರ್ಪನ್ನು ನೀಡಿತ್ತು. ಬಹುಮತ ಸಾಬೀತಿಗೂ ಮುನ್ನಾವೇ ಅಜಿತ್ ರಾಜೀನಾಮೆ ನೀಡಿರುವುದು ಭಾರೀ ಕುತೂಹಲವನ್ನು ಮೂಡಿಸಿದೆ. ಅದಲ್ಲದೆ ಮುಖ್ಯಮಂತ್ರಿ ಫಡ್ನವಿಸ್ ಅವರು 3.30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ.