ನವದೆಹಲಿ: ಸಿದ್ದಗಂಗಾ ಮಠದ ಲಿಂಗೈಕ್ಯರಾಗಿರುವ ಶಿವಕುಮಾರ ಸ್ವಾಮೀಜಿ ಅವರ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನವಿತ್ತರು.
ಗುರುವಾರ ಪ್ರಧಾನಿ ಅವರನ್ನು ಸಂಸತ್ ಭವನದ ಕಚೇರಿಯಲ್ಲಿ ಭೇಟಿ ಮಾಡಿದ ಸ್ವಾಮೀಜಿ ಅವರು 2020ರ ಜನವರಿ 21ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿಕೊಂಡರು.
ಗಣರಾಜ್ಯೋತ್ಸವ ಸಮಯದಲ್ಲಿ ಕಾರ್ಯಕ್ರಮವಿರುವ ಕಾರಣದಿಂದಾಗಿ ಸಿದ್ಧಗಂಗೆಗೆ ಬರಲು ಸಾಧ್ಯವಾಗದೆ ಇರಬಹುದು. ಆದರೂ ಬರಲು ಪ್ರಯತ್ನಿಸುವೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಪ್ರಧಾನಿ ಅವರಿಗೆ ಕಾರ್ಯಕ್ರಮಕ್ಕೆ ಮೊದಲೇ ಮಠಕ್ಕೆ ಭೇಟಿ ನೀಡಲು ಕೋರಿಕೊಳ್ಳಲಾಗಿದೆ.