ನವದೆಹಲಿ: ರಾಜಸ್ಥಾನ ಟೋಂಕ್ ಜಿಲ್ಲೆಯಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ.
1 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಶನಿವಾರ ನಾಪತ್ತೆಯಾಗಿದ್ದು, ಭಾನುವಾರ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯನ್ನು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.