ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಐದು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಇಂದಿರಾಪುರಂನ ವೈಭವ್ ಖಾಡ ಎಂಬ ಪ್ರದೇಶದಲ್ಲಿ ಪತಿ, ಪತ್ನಿ ಮತ್ತು ಮತ್ತೊಬ್ಬಳು ಮಹಿಳೆಯು ಅಪಾರ್ಟ್ ಮೆಂಟ್ ನ ಎಂಟನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೇ ವೇಳೆ ಇವರು ಆತ್ಮಹತ್ಯೆಗೂ ಮುನ್ನ ತಮ್ಮ ಇಬ್ಬರು ಮಕ್ಕಳನ್ನು ಕೊಂದಿದ್ದಾರೆ.
ಪತಿ ಹಾಗೂ ಪತ್ನಿಯು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಮಹಿಳೆಯು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹ ಮತ್ತು ಆರ್ಥಿಕ ಸಮಸ್ಯೆಯು ಆತ್ಮಹತ್ಯೆಗೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.