ನವದೆಹಲಿ: ಸುರ್ಜಾಪುರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದ ಎನ್ ಕೌಂಟರ್ ವೇಳೆ ಉತ್ತರ ಪ್ರದೇಶ ಪೊಲೀಸರು ಇಬ್ಬರು ಅಪರಾಧಿಗಳನ್ನು ಬಂಧಿಸಿದ್ದಾರೆ.
ಈ ಇಬ್ಬರು ಅಪರಾಧಿಗಳು ಅಂತರ್ ರಾಜ್ಯ ಮೊಬೈಲ್ ಮತ್ತು ಲ್ಯಾಪ್ ಟಾಪ್ ಕಳವು ಪ್ರಕರಣದಲ್ಲಿ ಭಾಗಿಯಾದವರು ಎಂಧು ಪೊಲೀಸರು ತಿಳಿಸಿದ್ದಾರೆ. ಇವರಿಂದ ಭಾರಿ ಪ್ರಮಾಣದ ಮೊಬೈಲ್ ಹಾಗೂ ಲ್ಯಾಪ್ ಟಾಪ್ ವಶಪಡಿಸಿಕೊಳ್ಳಲಾಗಿದೆ.
ಸುರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರೇಟರ್ ನೊಯ್ಡಾ ಭಾಗದಲ್ಲಿ ಮಂಗಳವಾರ ತಡರಾತ್ರಿ ವೇಳೆ ಇಬ್ಬರು ಅಪರಾಧಿಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ಪೊಲೀಸರ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ ವೇಳೆ ಎನ್ ಕೌಂಟರ್ ನಡೆದಿದೆ.
ಎನ್ ಕೌಂಟರ್ ನಲ್ಲಿ ಇಬ್ಬರು ಅಪರಾಧಿಗಳಿಗೆ ಗಾಯವಾಗಿದೆ ಮತ್ತು ಅವರನ್ನು ಬಂಧಿಸಲಾಗಿದೆ.