ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.
ಜಸ್ಟಿಸ್ ಬಾನುಮತಿ ಅವರನ್ನು ಒಳಗೊಂಡಿರುವ ನ್ಯಾಯಪೀಠವು ಈ ತೀರ್ಪನ್ನು ನೀಡಿದೆ. ವಿಚಾರಣೆ ಬಳಿಕ ನವಂಬರ್ 28ರಂದು ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.
ಪ್ರಕರಣದಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ್ದ ದೆಹಲಿ ಹೈಕೋರ್ಟ್ ನ ತೀರ್ಪನ್ನು ಚಿದಂಬರಂ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.
ಕಳೆದ 107 ದಿನಗಳಿಂದ ತಿಹಾರ್ ಜೈಲಿನಲ್ಲಿ ಇರುವ ಚಿದಂಬರಂ ಅವರಿಗೆ ಈ ಬಿಡುಗಡೆ ಭಾಗ್ಯ ಸಿಕ್ಕಿದೆ.