ನವದೆಹಲಿ: ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ಯೋಧನೊಬ್ಬ ಗುಂಡು ಹಾರಿಸಿದ ಪರಿಣಾಮ ಇಂಡೊ-ಟೆಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ)ಯ ಆರು ಮಂದಿ ಜವಾನರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐಟಿಬಿಪಿಯ 45ನೇ ಬ್ಯಾಟಲಿಯನ್ ನಲ್ಲಿ ಯೋಧರ ಮಧ್ಯೆ ನಡೆದ ಮನಸ್ತಾಪದಿಂದಾಗಿ ಈ ಘಟನೆಯು ನಡೆದಿದೆ. ಇತರ ಜವಾನರಿಗೆ ಗುಂಡಿಕ್ಕಿ ಕೊಂದ ಬಳಿಕ ಸ್ವತಃ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಾಯಾಳು ಯೋಧರನ್ನು ರಾಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಛತ್ತೀಸಗಡ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪಡೆ(ಸಿಆರ್ ಪಿಎಫ್) ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ.