ಹೈದರಾಬಾದ್: ತೆಲಂಗಾಣದ ಪಶುವೈದ್ಯೆಯನ್ನು ಅತ್ಯಾಚಾರ ಎಸಗಿ ಸುಟ್ಟು ಹಾಕಿದ್ದ ಪ್ರಕರಣದ ಆರೋಪಿಗಳಾದ ನಾಲ್ವರನ್ನು ಪೊಲೀಸರ ಎನ್ ಕೌಂಟರ್ ಮಾಡಿದ್ದಾರೆ.
ವೈದ್ಯೆಯನ್ನು ಹತ್ಯೆ ಮಾಡಿದ್ದ ಸ್ಥಳಕ್ಕೆ ಮಹಜರು ಮಾಡಲು ಕರೆದುಕೊಂಡು ಹೋದ ವೇಲೆ ಆರೋಪಿಗಳಾದ ಮೊಹಮ್ಮದ್ ಅಲಿ ಅಲಿಯಾಸ್ ಮೊಹಮ್ಮದ್ ಆರಿಫ್, ಜೊಲ್ಲು ಶಿವಾ, ಜೊಲ್ಲು ನವೀನ್ ಕುಮಾರ್ ಮತ್ತು ಚಿನಟಕುಂಟ ಚೆನ್ನ ಕೇಶವುಲು ಪರಾರಿಯಾಗಲು ಯತ್ನಿಸಿದ ವೇಳೆ ಎನ್ ಕೌಂಟರ್ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 28ರಂದು ಪಶುವೈದ್ಯೆಯನ್ನು ರಂಗರೆಡ್ಡಿ ಜಿಲ್ಲೆಯ ಶಬಾದ್ ನಗರದಲ್ಲಿರುವ ಚಟನ್ ಪಲ್ಲಿ ಸೇತುವೆ ಬಳಿ ಅತ್ಯಾಚಾರ ಎಸಗಿ ಸುಟ್ಟು ಹಾಕಲಾಗಿತ್ತು. ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಎನ್ ಕೌಂಟರ್ ನಡೆಸಲಾಗಿದೆ.