News Kannada
Monday, October 03 2022

ದೇಶ-ವಿದೇಶ

ಹಲ್ಲೆ ನಡೆಸಿದಾಗ ಗುಂಡು ಹಾರಿಸಬೇಕಾಯಿತು: ವಿಶ್ವನಾಥ್ ಸಜ್ಜನರ - 1 min read

Photo Credit :

ಹಲ್ಲೆ ನಡೆಸಿದಾಗ ಗುಂಡು ಹಾರಿಸಬೇಕಾಯಿತು: ವಿಶ್ವನಾಥ್ ಸಜ್ಜನರ

ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಪ್ರಕರಣ ಸಂಬಂಧ ಘಟನಾ ಸ್ಥಳದಲ್ಲಿ ಮಹಜರು ಮಾಡುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಗುಂಡು ಹಾರಿಸಲಾಯಿತು ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ ತಿಳಿಸಿದರು.

ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಘಟನಾ ಸ್ಥಳಕ್ಕೆ ಮಹಜರು ನಡೆಸಲು ಆರೋಪಿಗಳನ್ನು ಕರೆದೊಯ್ದ ವೇಳೆ ಪೊಲೀಸರಿಂದ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಂಡು ಅವರನ್ನು ದೊಣ್ಣೆಗಳಿಂದ ಹೊಡೆದು ಪರಾರಿಯಾಗಲು ಯತ್ನಿಸಿದರು. ಈ ವೇಳೆ 10 ಮಂದಿ ಪೊಲೀಸರ ತಂಡ ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ಇಂದು ಮುಂಜಾನೆ ಸುಮಾರು 5.30ರ ಸುಮಾರಿಗೆ ಎನ್ ಕೌಂಟರ್ ನಡೆದಿದೆ. ಈ ವೇಳೆ ಎಸ್ ಐ ಸೇರಿದಂತೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ನ.27ರಂದು ಪಶುವೈದ್ಯೆಯನ್ನು ಅಪಹರಿಸಿ ಆಕೆಯ ಮೇಲೆ ನಾಲ್ವರು ಅತ್ಯಾಚಾರ ಎಸಗಿ ಸುಟ್ಟು ಹಾಕಿದ್ದರು. ತನಿಖೆ ತೀವ್ರಗೊಳಿಸಿದ ಪೊಲೀಸರು ನಾಲ್ವರನ್ನು ಬಂದಿಸಿ ಪೊಲಿಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು. ಮಹಜರು ವೇಳೆ ಪರಾರಿಯಾಗಲು ಯತ್ನಿಸಿದಾಗ ಎನ್ ಕೌಂಟರ್ ನಡೆಸಲಾಗಿದೆ ಎಂದು ಸ್ಪಷ್ಟನೆ ನಿಡಿದರು.

 

See also  ವಿರೋಧಿಸುವುದೇ ಕಾಂಗ್ರೆಸ್‌ ಗುಣ ; ಕಟೀಲ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು