ಹೈದರಾಬಾದ್: ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣ ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್ ಕೌಂಟರ್ ಮಾಡಿದ್ದು ಅವರ ಮೃತದೇಹದ ಅಂತ್ಯಸಂಸ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ತಡೆ ನೀಡಿದೆ.
ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿ ಸೋಮವಾರ ಸಂಜೆ 8 ಗಂಟೆಯವರೆಗೆ ಮೃತದೇಹಗಳನ್ನು ಇರಿಸಿಕೊಳ್ಳಬೇಕೆಂದು ಹೇಳಿದೆ. ಮರಣೋತ್ತರ ಪರೀಕ್ಷೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಪೆನ್ ಡ್ರೈವ್ ನಲ್ಲಿ ಹಾಕಿಕೊಳ್ಳಬೇಕೆಂದು ಹೇಳಿದೆ.
ಗುರುವಾರ ಮುಂಜಾನೆ 5.30ರ ಸುಮಾರಿಗೆ ಸೈಬರಾಬಾದ್ ಪೊಲೀಸರು ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಕೊಂದು ಹಾಕಿದ್ದರು. ಇದಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.