News Kannada
Sunday, October 02 2022

ದೇಶ-ವಿದೇಶ

ಕೊನೆಗೂ ಬದುಕುಳಿಯಲಿಲ್ಲ ಉನ್ನಾವೋ ರೇಪ್ ಸಂತ್ರಸ್ತೆ - 1 min read

Photo Credit :

ಕೊನೆಗೂ ಬದುಕುಳಿಯಲಿಲ್ಲ ಉನ್ನಾವೋ ರೇಪ್ ಸಂತ್ರಸ್ತೆ

ನವದೆಹಲಿ: ಅತ್ಯಾಚಾರ ಎಸಗಿ ನಂತರ ಬೆಂಕಿ ಹಚ್ಚಿ ಹಲ್ಲೆ ನಡೆಸಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾಳೆ.

24 ವರ್ಷದ ಯುವತಿಯನ್ನು ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಲಾಗಿತ್ತು ಮತ್ತು ಮೊನ್ನೆ ಗುರುವಾರದಂದು ಈ ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳು ಮತ್ತು ಇತರೇ ಮೂವರು ಸೇರಿದಂತೆ ಒಟ್ಟು ಐದು ಮಂದಿಯ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಬಳಿಕ ಬೆಂಕಿ ಹಚ್ಚಿದ್ದರು.

ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿ ಬೆಂಕಿ ಇಟ್ಟ ಐವರ ಪೈಕಿ ಒಬ್ಬಾತ ಕೆಲ ದಿನಗಳ ಹಿಂದಷ್ಟೇ ಜಾಮೀನು ಪಡೆದು ಹೊರಬಂದಿದ್ದ. ಸಂತ್ರಸ್ತೆ ತನ್ನ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಉನ್ನಾವೋದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ದುಷ್ಕರ್ಮಿಗಳು ಈಕೆಯ ಮೇಲೆ ಬೆಂಕಿ ಹಚ್ಚಿದ ಪರಿಣಾಮ ಈಕೆಯ ದೇಹಭಾಗ ಶೇ 90 ಸುಟ್ಟುಹೋಗಿತ್ತು.

ಘಟನೆಯ ಬಳಿಕ ಗಂಭೀರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ಮೊದಲಿಗೆ ಲಕ್ನೋದಲ್ಲಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ಸಾಯಂಕಾಲದಂದು ಏರ್ ಲಿಫ್ಟ್ ಮಾಡಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ಸಂತ್ರಸ್ತೆಗೆ ಹೃದಯ ಸ್ತಂಭನವಾಗಿದೆ ಮತ್ತು 11.40ರ ಸುಮಾರಿಗೆ ಈಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು ಎಂಬ ಮಾಹಿತಿಯನ್ನು ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳು ಮತ್ತು ಪ್ಲಾಸ್ಟಿಕ ಸರ್ಜರಿ ವಿಭಾಗದ ಮುಖ್ಯಸ್ಥರಾಗಿರುವ ಡಾ.ಶಲಭ್ ಕುಮಾರ್ ಅವರು ಎ.ಎನ್.ಐ. ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

 

See also  ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆ ಮಾಡುವುದಾಗಿ ತಿಳಿಸಿದ ಸುಪ್ರೀಂಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು