ನವದೆಹಲಿ: ಇಲ್ಲಿನ ಅನಜ್ ಮಂಡಿ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ೩೦ ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ೧೫ ಮಂದಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.
ಘಟನೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಉಪ ಮುಖ್ಯಾಧಿಕಾರಿ ಸುನಿಲ್ ಚೌಧರಿ, 600 ಚದರಡಿ ಸ್ಥಳದಲ್ಲಿ ಅಗ್ನಿ ಅವಘಡವುಂಟಾಗಿದೆ.ಕಾರ್ಖಾನೆ ಒಳಗೆ ತೀವ್ರ ಕತ್ತಲು ಕವಿದಿತ್ತು. ಶಾಲಾ ಬ್ಯಾಗುಗಳು, ಬಾಟಲ್ ಗಳು ಮತ್ತು ಇತರ ಸಾಮಗ್ರಿಗಳು ಇರುವ ಕಾರ್ಖಾನೆಯಾಗಿದೆ.
ಮಧ್ಯಮ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿದಿದ್ದು ಇದೀಗ ಬೆಂಕಿಯನ್ನು ಸಂಪೂರ್ಣವಾಗಿ ಆರಿಸಲಾಗಿದೆ ಎಂದರು. ರಕ್ಷಣಾ ಕಾರ್ಯ ಮುಂದುವರಿದಿದೆ.