News Kannada
Wednesday, November 30 2022

ದೇಶ-ವಿದೇಶ

ಉನ್ನಾವೋ ಅತ್ಯಾಚಾರ ಪ್ರಕರಣ: ತೀರ್ಪು ಕಾಯ್ದಿರಿಸಿದ ಕೋರ್ಟ್ - 1 min read

Photo Credit :

ಉನ್ನಾವೋ ಅತ್ಯಾಚಾರ ಪ್ರಕರಣ: ತೀರ್ಪು ಕಾಯ್ದಿರಿಸಿದ ಕೋರ್ಟ್

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ಸಹಿತ ಇತರರ ಮೇಲಿನ ಪ್ರಕರಣದ ತೀರ್ಪನ್ನು ದೆಹಲಿ ಕೋರ್ಟ್ ಡಿಸೆಂಬರ್ 16ಕ್ಕೆ ಕಾಯ್ದಿರಿಸಿದೆ.

2017ರಲ್ಲಿ ಸೆಂಗರ್ ಮಹಿಳೆಯನ್ನು ಅತ್ಯಾಚಾರ ಮಾಡಿದ್ದಾಗಿ ಪ್ರಕರಣ ದಾಖಲಾಗಿತ್ತು. 2019ರ ಜುಲೈಯಲ್ಲಿ ಮಹಿಳೆ ಮತ್ತು ಆಕೆಯ ಕುಟುಂಬದವರು ಸಾಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆಸಿ ಹತ್ಯೆಗೆ ಯತ್ನಿಸಲಾಗಿತ್ತು. ಆಕೆಯ ಇಬ್ಬರು ಕುಟುಂಬ ಸದಸ್ಯರು ಘಟನೆಯಲ್ಲಿ ಮೃತಪಟ್ಟಿದ್ದರು. ಆಕೆ ಏಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.

ಡಿಸೆಂಬರ್ 5ರಂದು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ರೇಪ್ ಸಂತ್ರಸ್ತೆ ಮೇಲೆ ಇಬ್ಬರು ಆರೋಪಿಗಳು ಮತ್ತು ಮೂವರು ಸ್ನೇಹಿತರು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಶೇ.90ರಷ್ಟು ಸುಟ್ಟು ಹೋಗಿದ್ದ ಆಕೆ ಡಿಸೆಂಬರ್ 6ರಂದು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಆರೋಪಿಗಳಿಗೆ ಗಲ್ಲಿಗೇರುವುದನ್ನು ತಾಣು ನೋಡಬೇಕು. ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡಬಾರದು ಎಂದು ಆಕೆ ಸಾಯುವ ಮುನ್ನ ತನ್ನ ಸಹೋದರನಲ್ಲಿ ಕೊನೆಯದಾಗಿ ಹೇಳಿದ್ದಾಗಿ ವರದಿಯಾಗಿದೆ.

ಈ ಘಟನೆ ಬಳಿಕ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

See also  ದಿವಂಗತ ಮಾಜಿ ಪ್ರಧಾನಿ ನರಸಿಂಹ ರಾವ್ ಜನ್ಮದಿನಕ್ಕೆ ಗೌರವ ಸಲ್ಲಿಸಿದ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು