News Kannada
Thursday, December 08 2022

ದೇಶ-ವಿದೇಶ

ಕಾಂಗ್ರೆಸ್ ನವರು ಜನರ ದಾರಿ ತಪ್ಪಿಸುತ್ತಿದ್ದಾರೆ: ಪ್ರಧಾನಿ ಮೋದಿ

Photo Credit :

ಕಾಂಗ್ರೆಸ್ ನವರು ಜನರ ದಾರಿ ತಪ್ಪಿಸುತ್ತಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರತಿಯೊಬ್ಬ ಪ್ರಜೆಯು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಲೆ ಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿಕೊಂಡಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಪ್ರತಿಪಕ್ಷಗಳು ಪೌರತ್ವ ಕಾಯ್ದೆ ವಿಚಾರದಲ್ಲಿ ಜನರನ್ನು ಹಾದಿ ತಪ್ಪಿಸುತ್ತಿದೆ ಎಂದರು.

ದೇಶದ ಜನರಿಗೆ ಈ ಕಾಯ್ದೆಯು ಹಕ್ಕನ್ನು ನೀಡುತ್ತಿದೆ. ಆದರೆ ಪ್ರತಿಪಕ್ಷದವರು ಈ ಕಾಯ್ದೆಯು ಹಕ್ಕು ಕಿತ್ತುಕೊಳ್ಳುತ್ತದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಸುಳ್ಳು ಹೇಳಿದ್ದರೆ ಚುನಾವಣೆಯಲ್ಲಿ ಸೋಲಿಸುತ್ತಾರೆ. ನಾವು ಯಾರದೇ ಜಾತಿ ಅಥವಾ ಧರ್ಮ ಕೇಳಿಕೊಂಡು ಯೋಜನೆ ಜಾರಿಗೆ ತಂದಿಲ್ಲ. ಆದರೆ ಕಾಂಗ್ರೆಸ್ ನವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿ ಆರೋಪಿಸಿದರು.

ಕಾಂಗ್ರೆಸ್ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಲಿ. ಬಡವರ ಆಸ್ತಿ ಸುಡುವುದನ್ನು ನಿಲ್ಲಿಸಲಿ ಎಂದು ಪ್ರಧಾನಿ ಅವರು ಮನವಿ ಮಾಡಿದರು.

ಆಸ್ತಿ ಹಕ್ಕು ಕೊಡುವಾಗ ಯಾರನ್ನಾದರೂ ದಾಖಲೆ ಕೇಳಿದ್ದೇನಾ? ಇದು ಎಲ್ಲರಿಗೂ ಸಿಕ್ಕಿ. ನಾನು ಸಬ್ ಕಾ ಸಾಥ್, ಸಬ್ ವಿಕಾಸ್ ಮಂತ್ರಕ್ಕೆ ಬದ್ಧನಾಗಿದ್ದೇನೆ ಎಂದರು.

See also  ಅರಬ್‌ ರಾಷ್ಟ್ರಗಳಿಂದ ಮಂಗಳೂರಿಗೆ ಬಂದ 190 ಮೆಟ್ರಿಕ್ ಟನ್ ಆಕ್ಸಿಜನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು