News Kannada
Friday, September 30 2022

ದೇಶ-ವಿದೇಶ

ಏಕತಾ ದಿನ: ಸರ್ದಾರ್ ವಲ್ಲಭಬಾಯಿ ಪಟೇಲ್‌ಗೆ ಮೋದಿ ಗೌರವಾರ್ಪಣೆ - 1 min read

Photo Credit :

ಏಕತಾ ದಿನ: ಸರ್ದಾರ್ ವಲ್ಲಭಬಾಯಿ ಪಟೇಲ್‌ಗೆ ಮೋದಿ ಗೌರವಾರ್ಪಣೆ

ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿದರು.

ಗುಜರಾತ್ ನ ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತೆಯ ಪ್ರತಿಮೆಯಿದ್ದು, ಅಲ್ಲಿಗೆ ಪ್ರಧಾನಿ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. ನಂತರ ರಾಷ್ಟ್ರೀಯ ಏಕತಾ ದಿವಸ ಪರೇಡ್ ನೆರವೇರಿದ್ದು ಅದರಲ್ಲಿ ಪ್ರಧಾನಿ ಭಾಗವಹಿಸಿ ವೀಕ್ಷಿಸಿ ಗೌರವ ಸ್ವೀಕರಿಸಿದರು.

ರಾಷ್ಟ್ರೀಯ ಏಕತಾ ದಿನ: ರಾಷ್ಟ್ರೀಯ ಏಕತಾ ದಿನವನ್ನು ಪ್ರತಿವರ್ಷ ಅಕ್ಟೋಬರ್ 31ರಂದು ಆಚರಿಸಲಾಗುತ್ತದೆ. ದೇಶದ ಉಕ್ಕಿನ ಮನುಷ್ಯ ಎಂದೇ ಜನಪ್ರಿಯರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ಏಕತಾ ದಿನವನ್ನಾಗಿ ಆಚರಿಸುವುದಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ಜಾರಿಗೆ ತಂದಿತು. ಈ ವರ್ಷ ಅವರ 145ನೇ ಜಯಂತಿ.

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ ಕೆವಾಡಿಯಾದಲ್ಲಿ ನರ್ಮದಾ ನದಿ ತೀರದಲ್ಲಿ ಸರ್ದಾರ ಅಣೆಕಟ್ಟಿನ ಎದುರಿಗೆ ಸರ್ದಾರ್ ವಲ್ಲಭಬಾಯಿ ಪಟೇಲರ ವಿಶ್ವದ ಅತಿ ಎತ್ತರದ ಪ್ರತಿಮೆ(597 ಅಡಿ)ಯನ್ನು ಉದ್ಘಾಟಿಸಿದ್ದರು.

See also  ಪೊಲೀಸರು ಎಲ್ಲಾ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರರು: ಸುಪ್ರೀಂಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು