News Kannada
Saturday, September 24 2022

ದೇಶ-ವಿದೇಶ

ಭಾರತದಲ್ಲಿ 47,638 ಕೋವಿಡ್‌ ಪ್ರಕರಣ ಪತ್ತೆ - 1 min read

Photo Credit :

ಭಾರತದಲ್ಲಿ 47,638 ಕೋವಿಡ್‌ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 47,638 ಮಂದಿಯಲ್ಲಿ ಹೊಸದಾಗಿ ಸೋಂಕು ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 84 ಲಕ್ಷ ಗಡಿ ದಾಟಿದೆ.

ಒಂದೇ ದಿನ 670 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,24,985ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ನಿನ್ನೆ ಒಂದೇ ದಿನ 54,157 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 77,65,966ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ 84,11,724 ಲಕ್ಷ ಮಂದಿ ಸೋಂಕಿತರ ಪೈಕಿ ದೇಶದಲ್ಲಿನ್ನೂ 5,27,962 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ದೇಶದಲ್ಲಿ 24 ಗಂಟೆಗಳಲ್ಲಿ 12,20,711 ಮಾದರಿಯನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 11,54,29,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ’ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

See also  ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನವಜ್ಯೋತ್ ಸಿಂಗ್ ಸಿಧು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು