News Kannada
Monday, January 30 2023

ದೇಶ-ವಿದೇಶ

ನಿವಾರ್‌ ಚಂಡಮಾರುತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

Photo Credit :

ನಿವಾರ್‌ ಚಂಡಮಾರುತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ನವದೆಹಲಿ: ನಿವಾರ್‌ ಚಂಡಮಾರುತದಿಂದ ಮೃತಪಟ್ಟವರ ಕುಟುಂಬದವರಿಗೆ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹ 50,000 ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಪ್ರಕಟಣೆ ತಿಳಿಸಿದೆ.

ಚಂಡಮಾರುತದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

‘ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಕೇಂದ್ರ ತಂಡಗಳನ್ನು ತಮಿಳುನಾಡಿಗೆ ಕಳುಹಿಸಲಾಗುತ್ತಿದೆ’ ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.

ತಮಿಳುನಾಡಿನ ಕಡಲೂರು ಜಿಲ್ಲೆಯ ಹಾನಿ ಪ್ರದೇಶಗಳಿಗೆ ತಮಿಳುನಾಡು ಮುಖ್ಯಮಂತ್ರಿ ಗುರುವಾರ ಭೇಟಿ ನೀಡಿದ್ದರು ಮತ್ತು ನಿವಾರ್ ಚಂಡಮಾರುತದಿಂದ ಉಂಟಾದ ಒಟ್ಟು ಹಾನಿಯ ಅಂದಾಜು ಮಾಡಿದ ನಂತರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು.

See also  ಕೃಷಿ ಕಾನೂನಿನ ವಿರುದ್ಧ ಕಾಂಗ್ರೆಸ್ ನ ಇಬ್ಬಗೆ ನೀತಿ: ರವಿಶಂಕರ್ ಪ್ರಸಾದ್ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು