ನವದೆಹಲಿ: ಕೋವಿಡ್ ನಿಂದಾಗಿ ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಅವರು(೫೯) ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಿರಣ್ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಹೇಶ್ವರಿ ಅವರು ರಾಜ್ಸಾಮಂದ್ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು.