ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಶಿವಸೇನೆಗೆ ಸೇರಲಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು.
ಊರ್ಮಿಳಾ ಹೆಸರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿವಸೇನೆಯು ರಾಜ್ಯಪಾಲರಿಗೆ ಕಳುಹಿಸಲಾಗಿದೆ.