ನವದೆಹಲಿ: ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಿಂಘು ಗಡಿಭಾಗಕ್ಕೆ ಭೇಟಿ ನೀಡುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಇಂದು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಕೇಂದ್ರದೊಂದಿಗೆ ನಡೆದ ನಾಲ್ಕು ಸುತ್ತುಗಳ ಮಾತುಕತೆ ವಿಫಲವಾದ ಬಳಿಕ ದೆಹಲಿಯ ವಿವಿಧ ಗಡಿಭಾಗಗಳಲ್ಲಿ ಹೆಚ್ಚಿರುವ ಪ್ರತಿಭಟನೆಯ ತಾಪ ಮತ್ತೆ ಭಾರತ್ ಬಂದ್ ಮಾಡುವ ತಿರುಗಿದೆ.
ಡಿಸೆಂಬರ್ 8 ರಂದು ಪ್ರತಿಭಟಿಸುತ್ತಿರುವ ರೈತ ಸಂಘಗಳು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಈ ಕರೆಗೆ ವಿರೋಧಪಕ್ಷಗಳು ಹಾಗೂ ಹಲವು ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಕೇಂದ್ರ ಸರಕಾರ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ ಮೇಲೆಯೂ ಅದನ್ನು ವಿರೋಧಿಸಿ, ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸುವವರೆಗೂ ಪ್ರತಿಭಟನೆ ಇನ್ನಷ್ಟು ತೀವ್ರವಾಗುತ್ತದೆ ಹೋಗುತ್ತದೆ ಎಂದು ರೈತ ಸಂಘಗಳು ಎಚ್ಚರಿಕೆ ನೀಡಿದೆ. ಅದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ ಡಿಸೆಂಬರ್ 9ರಂದು ಮತ್ತೊಮ್ಮೆ ಮಾತುಕತೆಗೆ ಆಹ್ವಾನವನ್ನು ನೀಡಿದೆ.