ಕೊಲ್ಕತ್ತ: ಪಚ್ಛಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರು ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
76 ವರ್ಷದ ಬುದ್ದದೇವ ಅವರನ್ನ ಕೋಲ್ಕತಾದ ಉಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೆ ಸಮಯದಲ್ಲಿ ಅವರಿಗೆ ಕೊರೋನ ಟೆಸ್ಟ್ ನಡೆಸಲಾಗಿದ್ದು ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಬುದ್ದದೇವ ಅವರಿಗೆ ನ್ಯುಮೋನಿಯಾ ಲಕ್ಷಣಗಳು ಕಂಡುಬಂದಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆಯಲ್ಲಿ ಪಚ್ಛಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುದ್ದದೇವ ಭಟ್ಟಾಚಾರ್ಯ ಅವರು ಬೇಗ ಗುಣಮುಖವಾಗಲೆಂದು ಟ್ವೀಟ್ ಮಾಡಿದ್ದಾರೆ.