ನವದೆಹಲಿ: ಮಾಜಿ ರಾಷ್ಟ್ರಪತಿ, ದಿವಂಗತ ಪ್ರಣಬ್ ಮುಖರ್ಜಿ ಅವರು ತಮ್ಮ ಆತ್ಮಕಥೆಯ ನಾಲ್ಕನೇ ಭಾಗವಾದ ದಿ ಪ್ರೆಸಿಡೆನ್ಷಿಯಲ್ ಇಯರ್ಸ್–2012–2017 ಕೃತಿಯಲ್ಲಿ ಪ್ರಮುಖವಾಗಿ ಮೋದಿ, ಮನ ಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಅವರ ಕಾರ್ಯವೈಖರಿಯನ್ನು ವಿಮರ್ಶಿಸಿರುವರು.
ಪ್ರಧಾನಿ ನರೇಂದ್ರ ಮೋದಿ ಅವರು ‘ನಿರಂಕುಶ ಶೈಲಿಯ ಕಾರ್ಯವೈಖರಿ’ಯನ್ನು ಹೊಂದಿದ್ದರೆ, ಮನ ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಯುಪಿಎ ಪಕ್ಷವನ್ನು ಉಳಿಸುವುದರಲ್ಲೇ ತಲ್ಲೀನರಾಗಿದ್ದು ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರಿತು. 2014ರ ಲೋಕಸಭೆ ಚುನಾವಣೆಗೂ ಮುನ್ನ ರಾಜಕೀಯ ಗುರಿ ಕಳೆದುಕೊಂಡಿದ್ದ ಕಾಂಗ್ರೆಸ್ನ ವ್ಯವಹಾರಗಳನ್ನು ನಿಭಾಯಿಸಲು ಸೋನಿಯಾ ಗಾಂಧಿ ಅವರು ಸಹ ಅಸಮರ್ಥರಾಗಿದ್ದರು ಎಂದು ಮುಖರ್ಜಿ ಅವರು ಬರೆದಿದ್ದಾರೆ.
ಈ ಆತ್ಮಕಥೆಯಲ್ಲಿ ಪ್ರಣವ್
ನಾನು ಪ್ರಧಾನಿ ಆಗಿದ್ದರೆ ಕಾಂಗ್ರೆಸ್ ಸೋಲುತ್ತಿರಲಿಲ್ಲ. ಪಕ್ಷದ ನಾಯಕತ್ವವನ್ನು ಕೆಲ ಕಾಂಗ್ರೆಸ್ ನಾಯಕರು ಪ್ರಶ್ನಿಸುತ್ತಿರುವ ಸಮಯದಲ್ಲಿ, ಜೊತೆಗೆ ದೀರ್ಘ ಅವಧಿಗೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ನ ಅಧ್ಯಕ್ಷರಾಗಿ ಮುಂದುವರಿಯುವುದಿಲ್ಲ ಎನ್ನುವ ಸೂಚನೆಗಳು ದೊರೆತಾಗ ಈ ಸಮಯದಲ್ಲಿ ಕಾಂಗ್ರೆಸ್ನ ವ್ಯವಹಾರಗಳನ್ನು ನಿಭಾಯಿಸಲು ಸೋನಿಯಾ ಗಾಂಧಿ ಅಸಮರ್ಥರಾಗಿದ್ದರು ಎಂದು ಅಭಿಪ್ರಾಯ ಪಟ್ಟಿದ್ದರು.
2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕೇವಲ 44 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ನ ಹೀನಾಯ ಸ್ಥಿತಿಯ ಬಗ್ಗೆಯೂ ಕೃತಿಯಲ್ಲಿ ಮುಖರ್ಜಿ ಅವರು ಉಲ್ಲೇಖಿಸಿದ್ದು, 2004ರಲ್ಲಿ ನಾನು ಪ್ರಧಾನಿಯಾಗಿದ್ದರೆ, 2014ರ ಲೋಕಸಭೆಯಲ್ಲಿ ಪಕ್ಷಕ್ಕೆ ಆಗಿದ್ದ ಹೀನಾಯ ಸೋಲು ತಡೆಯಬಹುದಿತ್ತು, ಇದು ಕೆಲ ಕಾಂಗ್ರೆಸ್ ಸದಸ್ಯರ ಅಭಿಪ್ರಾಯವಾಗಿತ್ತು ಎಂದು ಉಲ್ಲೇಖಿಸಿದ್ದಾರೆ.