ನವದೆಹಲಿ: ಶಕುರ್ ಬಸ್ತಿ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ನಲ್ಲಿ ಕಾಯುತ್ತಿದ್ದ 22 ವರ್ಷದ ಯುವತಿಯನ್ನು ಎಳೆದೊಯ್ಯಲಾಗಿದ್ದು, ಗುರುವಾರ ರಾತ್ರಿ ಮೂವರು ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ರೈಲ್ವೆ ನಿಲ್ದಾಣದ ಸಮೀಪ ತನ್ನ ಕುಟುಂಬದೊಂದಿಗೆ ವಾಸಿಸುತ್ತಿರುವ ಸಂತ್ರಸ್ತೆ, ತನ್ನ ಕುಟುಂಬ ಸದಸ್ಯರೊಂದಿಗೆ ವಾಗ್ವಾದ ನಡೆಸಿ ಹೊರ ಹೋಗಿದ್ದಳು. ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ಮೇಲೆ ಕುಳಿತಿದ್ದಳು.
“ಆ ಮೂವರು ಅಲ್ಲಿಗೆ ಬಂದಾಗ ಅವಳು ಒಬ್ಬಂಟಿಯಾಗಿ ಕುಳಿತಿದ್ದನ್ನು ನೋಡಿ ಅವಳನ್ನು ಅವಳನ್ನು ಅನುಚಿತವಾಗಿ ಸ್ಪರ್ಶಿಸಲು ಪ್ರಾರಂಭಿಸಿದರು ಮತ್ತು ಅವಳು ವಿರೋಧಿಸಿದಾಗ, ಅವರು ಅವಳನ್ನು ಹಿಡಿದು ಪ್ರತ್ಯೇಕ ಮೂಲೆಯಲ್ಲಿರುವ ಪೊದೆಗೆ ಎಳೆದೊಯ್ದು ಈ ಕೃತ್ಯ ಎಸಗಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.
ಪುರುಷರು ಹೋದ ನಂತರ, ಮಹಿಳೆ ಮನೆಗೆ ತಲುಪಿ ತನ್ನ ಕುಟುಂಬ ಸದಸ್ಯರಿಗೆ ಈ ಬಗ್ಗೆ ಮಾಹಿತಿ ನೀಡಿದರು. ನಂತರ ಪೊಲೀಸರಿಗೆ ಮಾಹಿತಿ ನೀಡಿ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಲೈಂಗಿಕ ದೌರ್ಜನ್ಯ ಆಗಿರುವುದು ದೃಪಟ್ಟ ನಂತರ, ಆಕೆಯ ದೂರಿನ ಆಧಾರದ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.
“ಆರೋಪಿಗಳನ್ನು ಬಂಧಿಸಲು ಪೊಲೀಸರು ಅನೇಕ ತಂಡಗಳನ್ನು ರಚಿಸಲಾಗಿದೆ. ಅವರನ್ನು ಗುರುತಿಸಲು ಮತ್ತು ಬಂಧಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ಅಧಿಕಾರಿ ಹೇಳಿದರು.