ಉತ್ತರಪ್ರದೇಶ: ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಡಿಸೆಂಬರ್ 16ರ ಬೆಳಗ್ಗೆ ಸುಮಾರು 10 ಗಂಟೆಯ ಸಮಯದಲ್ಲಿ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ಮುಖಾಮುಖಿಯಾಗಿ ಅಪಘಾತಕ್ಕೀಡಾದ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಬಸ್ ಪ್ರಯಾಣಿಕರಲ್ಲಿ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 25 ಮಂದಿ ಗಾಯಗೊಂಡಿದ್ದಾರೆ. ಆಗ್ರಾ- ಮೊರಾದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಮಂಜು ಕವಿದ ವಾತಾವರಣದಿಂದಾಗಿ ರಸ್ತೆ ಸರಿಯಾಗಿ ಕಾಣದಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ರಕ್ಷಣಾಕಾರ್ಯ ಇನ್ನು ನಡೆಯುತ್ತಿದೆ. ತೀವ್ರವಾಗಿ ಗಾಯಗೊಂಡಿರುವ ಅವರ ಸಂಖ್ಯೆ ಹೆಚ್ಚಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರವರ್ತಿ ಮಿಶ್ರ ತಿಳಿಸಿದ್ದಾರೆ.