News Kannada
Monday, February 06 2023

ದೇಶ-ವಿದೇಶ

ಸಭೆಯಲ್ಲಿ ಕೃಷಿ ಕಾಯ್ದೆ ಪತ್ರಗಳನ್ನು ಹರಿಯುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಕೇಜ್ರಿವಾಲ್

Photo Credit :

ಸಭೆಯಲ್ಲಿ ಕೃಷಿ ಕಾಯ್ದೆ ಪತ್ರಗಳನ್ನು ಹರಿಯುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಕೇಜ್ರಿವಾಲ್

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ನಡೆದ ವಿಧಾನಸಭಾ ವಿಶೇಷ ಅಧಿವೇಶನದಲ್ಲಿ ಕೃಷಿ ಮಸೂದೆಯ ಪತ್ರಗಳನ್ನು ಹರಿಯುವುದರ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.

ಕೃಷಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ರೈತ ಹೋರಾಟವನ್ನು ಸಮರ್ಥಿಸಿಕೊಂಡು ಕೇಜ್ರಿವಾಲ್, “ಇಂತಹ ಕೊರೋನಾ ಸಂದರ್ಭದಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೊಳಿಸುವ ಅಗತ್ಯವೇನಿತ್ತು? ನಾನು ಮೊದಲು ಈ ದೇಶದ ನಾಗರಿಕ. ಆನಂತರ ಒಬ್ಬ ಮುಖ್ಯಮಂತ್ರಿ. ರಸ್ತೆಯಲ್ಲಿ ಕುಳಿತು ರೈತರು ಚಳುವಳಿಯನ್ನು ಮಾಡೋದನ್ನು ನೋಡಿದಾಗ ಸಂಕಟವಾಗುತ್ತದೆ. ಬ್ರಿಟಿಷರಿಗಿಂತ ಕೆಟ್ಟವರಾಗಬಾರದು” ಎಂದು ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷದ ಶಾಸಕರು ಕೃಷಿ ಕಾಯ್ದೆಯ ಪತ್ರಗಳನ್ನು ಹರಿದು ಆಕ್ರೋಶವನ್ನು ವ್ಯಕ್ತಪಡಿಸಿದರು.

See also  ಕೊರೋನ ವಿರುದ್ಧದ ಹೋರಾಟದಲ್ಲಿ ಭಾರತದ ಸ್ಪಂದನೆಗೆ ಧನ್ಯವಾದ ತಿಳಿಸಿ ವಿಶ್ವ ಆರೋಗ್ಯ ಸಂಸ್ಥೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು