ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಪರಿಸರ ಸಂರಕ್ಷಣೆಗಾಗಿ ನೂತನ ಪರಿಸರ ಸಮಿತಿ ರಚಿಸಿದ್ದಾರೆ. ಈ ಮೂಲಕ ಪ್ರಸ್ತುತ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಗಿಂತಲೂ ವಿಭಿನ್ನವಾದ ಪರಿಸರ ನೀತಿಯನ್ನು ಅನುಸರಿಸುವುದಾಗಿ ಅಧಿಕಾರ ಸ್ವೀಕರಿಸುವುದಕ್ಕಿಂತ ಮೊದಲೇ ಘೋಷಿಸಿದ್ದಾರೆ.
ಇಷ್ಟೇ ಅಲ್ಲದೆ ಪ್ಯಾರಿಸ್ ಒಪ್ಪಂದಕ್ಕೆ ಮತ್ತೆ ಬದ್ಧತೆ ವ್ಯಕ್ತಪಡಿಸುವುದಾಗಿ ತಿಳಿಸಿರುವ ನೂತನ ಅಧ್ಯಕ್ಷ, ಅಧ್ಯಕ್ಷೀಯ ಚುನಾವಣೆಯಲ್ಲಿ ನೀಡಿದ ಮಾತುಗಳಿಗೆ ಬದರಿರುವಂತೆ ಇರುವಂತೆ ತಿಳಿಸಿದ್ದಾರೆ. ಈ ಮೂಲಕ ಜನವರಿ 20ರಂದು ಅಧಿಕಾರ ಸ್ವೀಕರಿಸುವ ಮುನ್ನವೇ ತನ್ನ ಕರ್ತವ್ಯ ನಿಷ್ಠೆಯನ್ನು ತೋರಿದ್ದಾರೆ.