News Kannada
Tuesday, February 07 2023

ದೇಶ-ವಿದೇಶ

ಹುಟ್ಟುಹಬ್ಬದ ಮರುದಿನವೇ ಕೊನೆಯುಸಿರೆಳೆದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮೋತಿಲಾಲ್ ವೋರಾ

Photo Credit :

ಹುಟ್ಟುಹಬ್ಬದ ಮರುದಿನವೇ ಕೊನೆಯುಸಿರೆಳೆದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮೋತಿಲಾಲ್ ವೋರಾ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮೋತಿಲಾಲ್ ವೋರ ಅನಾರೋಗ್ಯದ ಕಾರಣ ನಿಧನರಾಗಿದ್ದರು.

ಪತ್ರಿಕೋದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಮೋತಿಲಾಲ್ ಅವರು 1968 ರಲ್ಲಿ ರಾಜಕೀಯದತ್ತ ಮುಖ ಮಾಡಿದ್ದರು. ಹಾಗೆ 1970 ರಲ್ಲಿ ಮಧ್ಯಪ್ರದೇಶದ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ನಂತರದ ದಿನಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ, ಸಂಪುಟ ದರ್ಜೆ ಸಚಿವರಾಗಿ, ಮಧ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1985 ರಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು ಮೂರು ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಅಷ್ಟೇ ಅಲ್ಲದೆ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ನಾಗರಿಕ ವಿಮಾನಯಾನ ಸಚಿವರಾಗಿಯೂ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿ ಎಲ್ಲಾ ಕ್ಷೇತ್ರಗಳನ್ನು ಬಲ್ಲವರು ಎನಿಸಿಕೊಂಡಿದ್ದರು.

ಭಾನುವಾರವಷ್ಟೇ ಅವರು ತಮ್ಮ 93ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಸಂಜೆಯ ವೇಳೆಗೆ ಅಸ್ವಸ್ಥತೆ ಕಂಡು ಬಂದ ಕಾರಣ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರಣ ಸೋಮವಾರ ಅವರು ತಮ್ಮ ಕೊನೆಯುಸಿರನ್ನು ಎಳೆದರು.

See also  ಬಿಹಾರದಲ್ಲಿ ಮೇ 25ರ ವರೆಗೆ ಲಾಕ್ ಡೌನ್ ವಿಸ್ತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು