ನವದೆಹಲಿ: ಲಂಡನ್ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿಸೆಂಬರ್ 22ರಿಂದ ಡಿಸೆಂಬರ್ 31ರ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಅಂತ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ವಿಶ್ವದ ಹಲವೆಡೆ ಕೊರೊನಾ ವೈರಸ್ ಹೊಸರೂಪದಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಈಕಟ್ ಎಚ್ಚರಿಕೆಯನ್ನು ವಹಿಸಿದ್ದು, ಅದರಲ್ಲಿ ಲಂಡನ್ ನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರುವ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸೋಮವಾರ ತಿಳಿಸಿದರು.
ಅದರೊಂದಿಗೆ ಜನರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವೈರಸ್ ಎಲ್ಲೆಡೆ ಹರಡದಂತೆ ಅದಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂಬ ಹರ್ಷವರ್ಧನ್ ಹೇಳಿದ್ದಾರೆ.