ವಾಷಿಂಗ್ಟನ್: ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮಕಾರಿ ನಾಯಕತ್ವ ಪ್ರದರ್ಶನ ತೋರಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಪ್ರಶಸ್ತಿಯನ್ನು ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತರನ್ ಜಿತ್ ಸಿಂಗ್ ಸಂಧು ಅವರು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಸ್ವೀಕರಿಸಿದರು. ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯಾನ್ ಶ್ವೇತಭವನದಲ್ಲಿ ಈ ಕಾರ್ಯಕ್ರಮ ನಡೆಯಿತು.
ದೇಶದ ಪ್ರಧಾನಿ ಅಥವಾ ಪ್ರಮುಖ ನಾಯಕರಿಗೆ ಈ ಪ್ರಶಸ್ತಿಯನ್ನು ಪ್ರದಾನಿಸುವ ಆಯ್ಕೆಯಲ್ಲಿ ಪರಿಗಣಿಸಲಾಗುತ್ತದೆ. ಅಂತಹ ಪ್ರಶಸ್ತಿಯನ್ನು ಈ ಬಾರಿ ಭಾರತಕ್ಕೆ ನೀಡಿದ್ದು, ಇದರಿಂದಾಗಿ ಭಾರತ ಮತ್ತು ಅಮೆರಿಕ ನಡುವಿನ ರಾಜತಾಂತ್ರಿಕ ಸಂಬಂಧ ಉತ್ತಮಪಡಿಸಲು ಸಹಾಯವಾಗುತ್ತದೆ ಎನ್ನಲಾಗುತ್ತಿದೆ.